Datasets:

ArXiv:
License:
anjalyjayakrishnan's picture
kannada raw data
32165da
raw
history blame
16.5 kB
Book_Chapter_Verse,Text
2TH_001_001,"ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ಮತ್ತು ತಿಮೊಥೆ ಎಂಬ ನಾವು ಬರೆಯುವುದೇನಂದರೆ,"
2TH_001_002,ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
2TH_001_003,"ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ."
2TH_001_004,ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮಿತ್ತ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ.
2TH_001_005,"ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು."
2TH_001_006,"ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ."
2TH_001_007,ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.
2TH_001_008,ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.
2TH_001_009,ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.
2TH_001_010,ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.
2TH_001_011,"ಆದುದರಿಂದ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ."
2TH_001_012,ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.
2TH_002_001,"ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,"
2TH_002_002,ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.
2TH_002_003,"ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ."
2TH_002_004,ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.
2TH_002_005,ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?
2TH_002_006,ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ.
2TH_002_007,"ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು."
2TH_002_008,"ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು."
2TH_002_009,"ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,"
2TH_002_010,ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.
2TH_002_011,ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.
2TH_002_012,ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.
2TH_002_013,"ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ."
2TH_002_014,ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.
2TH_002_015,"ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ."
2TH_002_016,"ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,"
2TH_002_017,"ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ."
2TH_003_001,"ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,"
2TH_003_002,"ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ."
2TH_003_003,"ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು."
2TH_003_004,"ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು."
2TH_003_005,ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.
2TH_003_006,"ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ."
2TH_003_007,"ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ."
2TH_003_008,"ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು."
2TH_003_009,"ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು."
2TH_003_010,"ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ."
2TH_003_011,"ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ."
2TH_003_012,ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.
2TH_003_013,"ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ."
2TH_003_014,ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
2TH_003_015,ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.
2TH_003_016,ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
2TH_003_017,"ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ."
2TH_003_018,ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.