Datasets:
ArXiv:
License:
Book_Chapter_Verse,Text | |
EPH_001_001,"ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ," | |
EPH_001_002,ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ. | |
EPH_001_003,"ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ." | |
EPH_001_004,"ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು." | |
EPH_001_005,ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು. | |
EPH_001_006,ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು. | |
EPH_001_007,ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು. | |
EPH_001_008,ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ. | |
EPH_001_009,ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ. | |
EPH_001_010,"ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು." | |
EPH_001_011,ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು. | |
EPH_001_012,ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು. | |
EPH_001_013,"ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ." | |
EPH_001_014,ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ. | |
EPH_001_015,"ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ," | |
EPH_001_016,ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ. | |
EPH_001_017,"ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ." | |
EPH_001_018,"ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ," | |
EPH_001_019,ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ. | |
EPH_001_020,"ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ" | |
EPH_001_021,ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. | |
EPH_001_022,"ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು." | |
EPH_001_023,"ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ." | |
EPH_002_001,ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ. | |
EPH_002_002,"ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ." | |
EPH_002_003,"ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು." | |
EPH_002_004,"ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ," | |
EPH_002_005,ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. | |
EPH_002_006,ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು | |
EPH_002_007,"ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ." | |
EPH_002_008,"ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ." | |
EPH_002_009,"ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ." | |
EPH_002_010,"ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ." | |
EPH_002_011,ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ. | |
EPH_002_012,"ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ." | |
EPH_002_013,"ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ." | |
EPH_002_014,"ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ." | |
EPH_002_015,"ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ." | |
EPH_002_016,"ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ." | |
EPH_002_017,ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು. | |
EPH_002_018,ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು. | |
EPH_002_019,ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. | |
EPH_002_020,ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. | |
EPH_002_021,"ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ." | |
EPH_002_022,ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ. | |
EPH_003_001,ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ. | |
EPH_003_002,"ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ," | |
EPH_003_003,ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ. | |
EPH_003_004,ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು. | |
EPH_003_005,ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ. | |
EPH_003_006,"ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ." | |
EPH_003_007,ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. | |
EPH_003_008,ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ | |
EPH_003_009,ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. | |
EPH_003_10-11,"ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು." | |
EPH_003_012,ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ. | |
EPH_003_013,ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ. | |
EPH_003_14-15,"ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು," | |
EPH_003_016,"ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ," | |
EPH_003_017,"ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ." | |
EPH_003_018,"ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ," | |
EPH_003_019,"ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ." | |
EPH_003_020,ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ | |
EPH_003_021,ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್. | |
EPH_004_001,"ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ." | |
EPH_004_002,"ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ." | |
EPH_004_003,ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ. | |
EPH_004_004,"ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು," | |
EPH_004_005,"ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ," | |
EPH_004_006,"ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ." | |
EPH_004_007,ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. | |
EPH_004_008,"ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”" | |
EPH_004_009,“ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? | |
EPH_004_010,"ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ." | |
EPH_004_011,"ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು." | |
EPH_004_012,"ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ," | |
EPH_004_013,"ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು." | |
EPH_004_014,"ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ," | |
EPH_004_015,ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. | |
EPH_004_016,"ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ." | |
EPH_004_017,ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ. | |
EPH_004_018,"ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ." | |
EPH_004_019,ಅವರು ಲಜ್ಜೆಗೆಟ್ಟವರಾಗಿ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ. | |
EPH_004_020,ನೀವಾದರೋ ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ. | |
EPH_004_021,ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ. | |
EPH_004_022,ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. | |
EPH_004_023,"ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ." | |
EPH_004_024,"ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ." | |
EPH_004_025,ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. | |
EPH_004_026,"“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ." | |
EPH_004_027,ಸೈತಾನನಿಗೆ ಅವಕಾಶಕೊಡಬೇಡಿರಿ. | |
EPH_004_028,ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು. | |
EPH_004_029,ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು. | |
EPH_004_030,ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. | |
EPH_004_031,"ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ." | |
EPH_004_032,"ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ." | |
EPH_005_001,ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ. | |
EPH_005_002,"ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ." | |
EPH_005_003,"ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು." | |
EPH_005_004,"ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ." | |
EPH_005_005,"ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ." | |
EPH_005_006,"ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ." | |
EPH_005_007,ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ. | |
EPH_005_008,"ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ." | |
EPH_005_009,ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ. | |
EPH_005_010,ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ. | |
EPH_005_011,ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ. | |
EPH_005_012,ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ. | |
EPH_005_013,ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ. | |
EPH_005_014,"ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ." | |
EPH_005_015,ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ. | |
EPH_005_016,ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ. | |
EPH_005_017,ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ. | |
EPH_005_018,"ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು," | |
EPH_005_019,"ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ." | |
EPH_005_020,ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ. | |
EPH_005_021,"ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ." | |
EPH_005_022,"ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ." | |
EPH_005_023,ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. | |
EPH_005_024,ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. | |
EPH_005_025,"ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ." | |
EPH_005_026,ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. | |
EPH_005_027,"ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು." | |
EPH_005_028,ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. | |
EPH_005_029,"ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ." | |
EPH_005_030,ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ. | |
EPH_005_031,"“ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ." | |
EPH_005_032,"ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು." | |
EPH_005_033,ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು. | |
EPH_006_001,"ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು." | |
EPH_006_002,"ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು," | |
EPH_006_003,"ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.”" | |
EPH_006_004,"ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ." | |
EPH_006_005,"ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ." | |
EPH_006_006,"ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ." | |
EPH_006_007,"ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ." | |
EPH_006_008,ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ. | |
EPH_006_009,"ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ." | |
EPH_006_010,"ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ." | |
EPH_006_011,ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. | |
EPH_006_012,"ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ." | |
EPH_006_013,ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. | |
EPH_006_014,"ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು," | |
EPH_006_015,ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. | |
EPH_006_016,ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. | |
EPH_006_017,ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ. | |
EPH_006_018,ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ. | |
EPH_006_019,ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. | |
EPH_006_020,ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ. | |
EPH_006_021,ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು. | |
EPH_006_022,"ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ." | |
EPH_006_023,"ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ." | |
EPH_006_024,ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ. | |