Datasets:

ArXiv:
License:
anjalyjayakrishnan's picture
kannada raw data
32165da
Book_Chapter_Verse,Text
1CO_001_001,"ದೇವರ ಚಿತ್ತದಂತೆ ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ ಸೊಸ್ಥೆನನೂ,"
1CO_001_002,"ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,"
1CO_001_003,"ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ."
1CO_001_004,ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ.
1CO_001_005,"ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ."
1CO_001_006,ಕ್ರಿಸ್ತನ ಕುರಿತಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿರುವ ಹಾಗೆಯೇ ಆತನು ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.
1CO_001_007,"ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,"
1CO_001_008,ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.
1CO_001_009,ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.
1CO_001_010,"ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ."
1CO_001_011,ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು.
1CO_001_012,"ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ."
1CO_001_013,ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?
1CO_001_014,ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ.
1CO_001_015,ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ.
1CO_001_016,ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ.
1CO_001_017,ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.
1CO_001_018,"ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ."
1CO_001_019,"“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ."
1CO_001_020,ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?
1CO_001_021,ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.
1CO_001_022,"ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;"
1CO_001_023,ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.
1CO_001_024,"ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ."
1CO_001_025,"ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ."
1CO_001_026,"ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ."
1CO_001_027,"ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು."
1CO_001_028,"ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ."
1CO_001_029,ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
1CO_001_030,"ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ."
1CO_001_031,“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.
1CO_002_001,"ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ."
1CO_002_002,ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.
1CO_002_003,"ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು."
1CO_002_4-5,"ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು."
1CO_002_006,"ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ."
1CO_002_007,ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.
1CO_002_008,ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;
1CO_002_009,"ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”"
1CO_002_010,"ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ."
1CO_002_011,ಮನುಷ್ಯನೊಳಗಿನ ಆಲೋಚನೆಗಳು ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ.
1CO_002_012,ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.
1CO_002_013,ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.
1CO_002_014,ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
1CO_002_015,ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.
1CO_002_016,“ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.
1CO_003_001,ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
1CO_003_002,ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ.
1CO_003_003,"ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?"
1CO_003_004,"ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲ್ಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ?"
1CO_003_005,ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.
1CO_003_006,ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.
1CO_003_007,"ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು."
1CO_003_008,"ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು."
1CO_003_009,ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.
1CO_003_010,ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.
1CO_003_011,ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
1CO_003_012,"ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ,"
1CO_003_013,ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.
1CO_003_014,ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು.
1CO_003_015,ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.
1CO_003_016,ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
1CO_003_017,ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.
1CO_003_018,ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”
1CO_003_019,"ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”"
1CO_003_020,“ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ
1CO_003_021,ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ.
1CO_003_022,"ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ."
1CO_003_023,"ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರಿನವನು."
1CO_004_001,ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.
1CO_004_002,ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.
1CO_004_003,ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ.
1CO_004_004,ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.
1CO_004_005,ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
1CO_004_006,"ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ."
1CO_004_007,ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?
1CO_004_008,ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು.
1CO_004_009,"ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು."
1CO_004_010,"ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು."
1CO_004_011,"ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ,"
1CO_004_012,ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ.
1CO_004_013,ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ.
1CO_004_014,ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
1CO_004_015,ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.
1CO_004_016,ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
1CO_004_017,"ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು."
1CO_004_018,ನಿಮ್ಮಲ್ಲಿ ಕೆಲವರು ಪೌಲನು ನಮ್ಮ ಬಳಿಗೆ ಬರುವುದಿಲ್ಲವೆಂದು ತಿಳಿದು ಉಬ್ಬಿಕೊಂಡಿದ್ದಾರೆ.
1CO_004_019,ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.
1CO_004_020,"ದೇವರ ರಾಜ್ಯವು ಮಾತಿನಲ್ಲಿ ಅಲ್ಲ, ಶಕ್ತಿಯಲ್ಲಿ ಅಡಗಿದೆ."
1CO_004_021,ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ?
1CO_005_001,ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.
1CO_005_002,"ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ."
1CO_005_003,"ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ."
1CO_005_004,ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ
1CO_005_005,ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.
1CO_005_006,ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?
1CO_005_007,ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.
1CO_005_008,ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.
1CO_005_009,ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ.
1CO_005_010,"ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು."
1CO_005_011,"ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ."
1CO_005_012,ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ.
1CO_005_013,ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”
1CO_006_001,ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ ದೇವಜನರೆದುರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ?
1CO_006_002,ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ?
1CO_006_003,ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
1CO_006_004,"ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನಿಮ್ಮಲ್ಲಿದ್ದರೆ, ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಏಕೆ ನೇಮಿಸಿಕೊಳ್ಳುತ್ತೀರಿ?"
1CO_006_005,ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
1CO_006_006,ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ?
1CO_006_007,"ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ ನಷ್ಟವನ್ನು ಯಾಕೆ ತಾಳಬಾರದು?"
1CO_006_008,ಆದರೆ ನೀವು ನಿಮ್ಮ ಸ್ವಂತ ಸಹೋದರರಿಗೆ ಅನ್ಯಾಯವನ್ನು ಮತ್ತು ಮೋಸವನ್ನು ಮಾಡಿದ್ದೀರಿ.
1CO_006_009,"ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,"
1CO_006_010,"ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ."
1CO_006_011,"ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ."
1CO_006_012,"“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ."
1CO_006_013,“ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.
1CO_006_014,ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು.
1CO_006_015,ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು
1CO_006_016,ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.
1CO_006_017,ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.
1CO_006_018,"ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ."
1CO_006_019,ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?
1CO_006_020,ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.
1CO_007_001,"ನೀವು ಬರೆದು ಕಳುಹಿಸಿದ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯವೇನೆಂದರೆ, ಸ್ತ್ರೀಯರ ಶರೀರ ಸಂಪರ್ಕವಿಲ್ಲದೆ ಇರುವುದು ಪುರುಷನಿಗೆ ಒಳ್ಳೆಯದು;"
1CO_007_002,ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.
1CO_007_003,"ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ"
1CO_007_004,ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.
1CO_007_005,ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.
1CO_007_006,"ನಾನು ಹೀಗೆ ಮಾಡಬಹುದೆಂದು ಹೇಳುತ್ತಿರುವುದು ಆಜ್ಞೆಯಲ್ಲ, ನನ್ನ ಅಭಿಪ್ರಾಯವಷ್ಟೇ."
1CO_007_007,ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ ಆದರೆ ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ.
1CO_007_008,"ಅವಿವಾಹಿತರನ್ನೂ ಮತ್ತು ವಿಧವೆಯರನ್ನೂ ಕುರಿತು ನಾನು ಹೇಳುವುದೇನಂದರೆ, ನಾನಿರುವಂತೆಯೆ ಇರುವುದು ಅವರಿಗೆ ಒಳ್ಳೆಯದು."
1CO_007_009,ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ.
1CO_007_010,"ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು."
1CO_007_011,"ಒಂದು ವೇಳೆ ಅಗಲಿದರೂ ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು."
1CO_007_012,"ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತಲ್ಲ ಆದರೆ ನಾನು ಹೇಳುವುದೇನಂದರೆ, ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು."
1CO_007_013,ಹಾಗೆಯೇ ಒಬ್ಬ ಸ್ತ್ರೀಗೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡಬಾರದು.
1CO_007_014,ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.
1CO_007_015,ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
1CO_007_016,"ಸ್ತ್ರೀಯೇ, ನೀನು ನಿನ್ನ ಗಂಡನನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಪುರುಷನೇ, ನೀನು ನಿನ್ನ ಹೆಂಡತಿಯನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು?"
1CO_007_017,ಆದರೆ ಕರ್ತನು ಪ್ರತಿಯೊಬ್ಬನಿಗೆ ನೇಮಿಸಿರುವ ಜವಾಬ್ದಾರಿಗೂ ಹಾಗೂ ದೇವರು ಅವರನ್ನು ಯಾವುದಕ್ಕೆ ಕರೆದನೋ ಅದಕ್ಕೂ ಸರಿಯಾಗಿ ಜೀವಿಸಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಅನುಸರಿಸಿಬೇಕೆಂದು ನಾನು ಅಜ್ಞಾಪಿಸುತ್ತೇನೆ.
1CO_007_018,ದೇವರು ಕರೆದ ಕಾಲದಲ್ಲಿ ಯಾವನಾದರೂ ಸುನ್ನತಿಯುಳ್ಳವನಾಗಿದ್ದನೋ ಅವನು ಸುನ್ನತಿಯಿಲ್ಲದವನಂತಾಗಬಾರದು. ದೇವರು ಕರೆದಾಗ ಯಾವನಾದರೂ ಸುನ್ನತಿಯಿಲ್ಲದವನಾಗಿದ್ದಾನೋ ಅವನು ಸುನ್ನತಿಮಾಡಿಸಿಕೊಳ್ಳಬಾರದು.
1CO_007_019,ಸುನ್ನತಿ ಇರುವುದೋ ಸುನ್ನತಿ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ.
1CO_007_020,ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.
1CO_007_021,ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದರ ಕುರಿತು ಚಿಂತಿಸಬೇಡ ಆದರೆ ಬಿಡುಗಡೆ ಹೊಂದುವುದಕ್ಕೆ ಸಾಧ್ಯವಾಗುವುದಾದರೆ ನೀನು ಸ್ವತಂತ್ರನಾಗು.
1CO_007_022,ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
1CO_007_023,ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು. ಮನುಷ್ಯರಿಗೆ ದಾಸರಾಗಬೇಡಿರಿ.
1CO_007_024,"ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರ ಮುಂದೆ ನೆಲೆಗೊಂಡಿರಲಿ."
1CO_007_025,ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.
1CO_007_026,ಈಗಿನ ಕಷ್ಟ ಕಾಲದ ನಿಮಿತ್ತ ಇದ್ದ ಹಾಗೆಯೇ ಇರುವುದು ಒಳ್ಳೆಯದೆಂದು ನಾನು ಭಾವಿಸುತ್ತೇನೆ.
1CO_007_027,ನೀನು ವಿವಾಹಿತನಾಗಿರುವುದಾದರೆ ಬಿಡುಗಡೆಯಾಗುವುದಕ್ಕೆ ಪ್ರಯತ್ನಿಸಬೇಡ. ನೀನು ಅವಿವಾಹಿತನಾಗಿರುವುದಾದರೆ ಹೆಂಡತಿಯನ್ನು ಪಡೆದುಕೊಳ್ಳುವುದಕ್ಕೆ ಪ್ರಯತ್ನಿಸಬೇಡ.
1CO_007_028,ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಅದು ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಅನೇಕ ಕಷ್ಟಗಳು ಸಂಭವಿಸುವವು. ಇದು ನಿಮಗೆ ಉಂಟಾಗಬಾರದೆಂಬುದೇ ನನ್ನ ಅಪೇಕ್ಷೆಯಾಗಿದೆ.
1CO_007_029,"ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,"
1CO_007_030,"ಅಳುವವರು ಅಳದಂತೆಯೂ, ಸಂತೋಷಪಡುವವರು ಸಂತೋಷಪಡದವರಂತೆಯೂ, ಕೊಂಡುಕೊಳ್ಳುವವರು ಏನೂ ಇಲ್ಲದವರಂತೆಯೂ,"
1CO_007_031,ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.
1CO_007_032,ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
1CO_007_033,ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ.
1CO_007_034,"ಅದರಂತೆ ಮುತೈದೆಗೂ, ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಹೇಗೆ ಪವಿತ್ರಳಾಗಿರಬೇಕೆಂದು ಕರ್ತನ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ."
1CO_007_035,"ನಾನು ನಿಮಗೆ ನಿರ್ಬಂಧ ಏರಬೇಕೆಂದು ಇದನ್ನು ಹೇಳುತ್ತಿಲ್ಲ. ನೀವು ಚಂಚಲ ಚಿತ್ತರಾಗದೆ ಕರ್ತನಿಗೆ ಮಾನ್ಯತೆಯುಳ್ಳವರಾಗಿ, ನಿಷ್ಠೆಯುಳ್ಳವರಾಗಿ ನಡೆದುಕೊಳ್ಳಬೇಕೆಂದು ನಿಮ್ಮ ಪ್ರಯೋಜನಕ್ಕೋಸ್ಕರವೇ ಹೇಳುತ್ತಿದ್ದೇನೆ."
1CO_007_036,ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಯ ಪ್ರಾಯ ಕಳೆದುಹೋಗುತ್ತದಲ್ಲಾ ಮದುವೆಮಾಡುವುದು ಅವಶ್ಯವೆಂದು ಅವನಿಗೆ ತೋರಿದರೆ ತನ್ನಿಷ್ಟದಂತೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.
1CO_007_037,ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿ ಕೊಂಡರೆ ಅವನು ಹಾಗೆಯೇ ಮಾಡುವುದು ಒಳ್ಳೆಯದು.
1CO_007_038,"ಹಾಗಾದರೆ ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ, ಮದುವೆಮಾಡಿಕೊಡದೆ ಇರುವವನು ಇನ್ನೂ ಒಳ್ಳೆಯದನ್ನು ಮಾಡುತ್ತಿದ್ದಾನೆ."
1CO_007_039,ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು.
1CO_007_040,ಆದರೂ ಮದುವೆಮಾಡಿಕೊಳ್ಳದೆ ಹಾಗೆ ಇರುವುದು ಆಕೆಗೆ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರ ಆತ್ಮವುಂಟೆಂದು ಭಾವಿಸುತ್ತೇನೆ.
1CO_008_001,"ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ."
1CO_008_002,ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.
1CO_008_003,ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.
1CO_008_004,"ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು."
1CO_008_005,"ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ,"
1CO_008_006,"“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”"
1CO_008_007,"ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ."
1CO_008_008,"ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ."
1CO_008_009,ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.
1CO_008_010,ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.
1CO_008_011,ಹೀಗೆ ಈ ನಿನ್ನ ಜ್ಞಾನದಿಂದ ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.
1CO_008_012,ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ.
1CO_008_013,ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.
1CO_009_001,ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?
1CO_009_002,ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ.
1CO_009_003,"ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ,"
1CO_009_004,"ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ?"
1CO_009_005,"ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?"
1CO_009_006,"ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ?"
1CO_009_007,ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ?
1CO_009_008,ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ?
1CO_009_009,“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ?
1CO_009_010,"ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು."
1CO_009_011,ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ?
1CO_009_012,"ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು."
1CO_009_013,ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?
1CO_009_014,ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.
1CO_009_015,ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು.
1CO_009_016,"ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!"
1CO_009_017,ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.
1CO_009_018,ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.
1CO_009_019,ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು.
1CO_009_020,"ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು."
1CO_009_021,"ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು."
1CO_009_022,ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.
1CO_009_023,"ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ."
1CO_009_024,"ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ."
1CO_009_025,ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.
1CO_009_026,ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ.
1CO_009_027,"ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ."
1CO_010_001,"ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು."
1CO_010_002,ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.
1CO_010_003,ಅವರೆಲ್ಲರೂ ಆತ್ಮೀಕವಾದ ಒಂದೇ ಆಹಾರವನ್ನು ತಿಂದರು.
1CO_010_004,ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.
1CO_010_005,ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.
1CO_010_006,ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.
1CO_010_007,"ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ."
1CO_010_008,ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.
1CO_010_009,ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.
1CO_010_010,ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.
1CO_010_011,ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.
1CO_010_012,ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.
1CO_010_013,ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
1CO_010_014,"ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ."
1CO_010_015,ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.
1CO_010_016,ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?
1CO_010_017,ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.
1CO_010_018,ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.
1CO_010_019,"ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,"
1CO_010_020,"ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ."
1CO_010_021,ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.
1CO_010_022,ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?
1CO_010_023,“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
1CO_010_024,ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.
1CO_010_025,ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.
1CO_010_026,“ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.”
1CO_010_027,ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.
1CO_010_028,ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.
1CO_010_029,ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
1CO_010_030,ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?
1CO_010_031,"ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ."
1CO_010_032,ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.
1CO_010_033,"ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ."
1CO_011_001,ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ.
1CO_011_002,ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
1CO_011_003,ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ.
1CO_011_004,"ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ, ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ."
1CO_011_005,ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದೆ ಇರುವುದೂ ತಲೆಬೋಳಿಸಿಕೊಂಡಿರುವುದೂ ಒಂದೇ.
1CO_011_006,ಸ್ತ್ರೀಯು ಮುಸುಕು ಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗೆಯಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ.
1CO_011_007,ಪುರುಷನು ದೇವರ ಪ್ರತಿರೂಪವೂ ಮತ್ತು ಪ್ರಭಾವವೂ ಆಗಿರುವುದರಿಂದ ತಲೆಯನ್ನು ಮುಚ್ಚಿಕೊಳ್ಳಬಾರದು. ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ.
1CO_011_008,ಪುರುಷನು ಸ್ತ್ರೀಯಿಂದ ಉತ್ಪತ್ತಿಯಾಗಲಿಲ್ಲ. ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು.
1CO_011_009,"ಇದಲ್ಲದೆ ಪುರುಷನು ಸ್ತ್ರೀಗೋಸ್ಕರವಾಗಿ ಸೃಷ್ಟಿಸಲ್ಪಡಲಿಲ್ಲ, ಆದರೆ ಸ್ತ್ರೀಯು ಪುರುಷನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಳು."
1CO_011_010,ಹೀಗಿರುವುದರಿಂದ ದೂತರ ನಿಮಿತ್ತವಾಗಿ ಸ್ತ್ರೀಯು ಪುರುಷನ ಅಧಿಕಾರವನ್ನು ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.
1CO_011_011,"ಆದರೂ ಕರ್ತನ ವಿಷಯದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ."
1CO_011_012,ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ. ಆದರೆ ದೇವರೇ ಸಮಸ್ತವನ್ನು ಸೃಷ್ಟಿಸಿದಾತನು.
1CO_011_013,ನಿಮ್ಮೊಳಗೆ ನೀವೇ ಯೋಚಿಸಿ ತೀರ್ಮಾನಿಸಿಕೊಳ್ಳಿರಿ. ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವುದು ಯುಕ್ತವೋ
1CO_011_014,"ಪುರುಷನು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನಕರವಾಗಿದೆಯೆಂದೂ,"
1CO_011_015,ಸ್ತ್ರೀಯು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವಳಿಗೆ ಮುಸುಕಿಗೆ ಬದಲಾಗಿ ನೀಡಲಾಗಿದ್ದು ಅದು ಅವಳಿಗೆ ಗೌರವವಾಗಿದೆಯೆಂದೂ ಸ್ವಾಭಾವಿಕವಾಗಿ ನಿಮಗೆ ತಿಳಿಯುತ್ತದಲ್ಲವೋ?
1CO_011_016,ಯಾವನಾದರೂ ಇದರ ಕುರಿತು ವಾಗ್ವಾದ ಮಾಡುವುದಾದರೆ ಇಂಥ ಪದ್ಧತಿ ನಮ್ಮಲ್ಲಿ ಇಲ್ಲ ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳಿದುಕೊಳ್ಳಿರಿ.
1CO_011_017,ನಾನು ಇನ್ನು ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ಯಾಕೆಂದರೆ ನೀವು ಒಟ್ಟಾಗಿ ಸೇರಿಬರುತ್ತಿರುವುದು ಕೇಡಿಗಾಗಿಯೇ ಹೊರತು ಮೇಲಿಗಾಗಿಯಲ್ಲ.
1CO_011_018,"ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ."
1CO_011_019,ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.
1CO_011_020,ನೀವೆಲ್ಲರು ಸೇರಿಬರುವಾಗ ನೀವು ಮಾಡುವ ಭೋಜನವು ಕರ್ತನ ಭೋಜನವಲ್ಲ.
1CO_011_021,ಭೋಜನ ಮಾಡುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ. ಹೀಗೆ ಒಬ್ಬನು ಹಸಿದಿರುತ್ತಾನೆ ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
1CO_011_022,"ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವುದಿಲ್ಲ."
1CO_011_023,"ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,"
1CO_011_024,"“ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು."
1CO_011_025,"ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು."
1CO_011_026,ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
1CO_011_027,ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು.
1CO_011_028,"ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ."
1CO_011_029,ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.
1CO_011_030,ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ.
1CO_011_031,ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ.
1CO_011_032,"ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ."
1CO_011_033,"ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವುದಕ್ಕೆ ಸೇರಿಬರುವಾಗ ಒಬ್ಬರು ಇನ್ನೊಬ್ಬರಿಗಾಗಿ ಕಾಯಿರಿ."
1CO_011_034,ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.
1CO_012_001,ಸಹೋದರರೇ ಪವಿತ್ರಾತ್ಮನಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿವಳಿಕೆಯಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
1CO_012_002,ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
1CO_012_003,ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.
1CO_012_004,ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ.
1CO_012_005,ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಕರ್ತನು ಒಬ್ಬನೇ.
1CO_012_006,ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಸರ್ವರಲ್ಲಿಯೂ ಸರ್ವ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.
1CO_012_007,ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ.
1CO_012_008,ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು
1CO_012_009,"ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು,"
1CO_012_010,"ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ."
1CO_012_011,ಆದರೆ ಈ ಎಲ್ಲವುಗಳಲ್ಲಿ ಕಾರ್ಯ ಮಾಡುವ ಆ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ.
1CO_012_012,"ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ."
1CO_012_013,"ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು."
1CO_012_014,ದೇಹವು ಒಂದೇ ಅಂಗವಲ್ಲ. ಅನೇಕ ಅಂಗಗಳುಳ್ಳದ್ದಾಗಿದೆ.
1CO_012_015,ಕಾಲು “ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ?
1CO_012_016,ಕಿವಿ “ನಾನು ಕಣ್ಣಲ್ಲದ ಕಾರಣ ನಾನು ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ?
1CO_012_017,ದೇಹವೆಲ್ಲಾ ಕಣ್ಣಾದರೆ ನೀವು ಏನೂ ಕೇಳಲಾಗುತ್ತಿರಲಿಲ್ಲ. ದೇಹವೆಲ್ಲಾ ಕಿವಿಯಾದರೆ ನೀವು ಯಾವ ವಾಸನೆಯನ್ನು ಮೂಸಲಾಗುತ್ತಿರಲಿಲ್ಲ.
1CO_012_018,ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ.
1CO_012_019,ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವುದು?
1CO_012_020,ಆದರೆ ಅಂಗಗಳು ಅನೇಕವಾಗಿದೆ ಆದರೆ ದೇಹವು ಒಂದೇ.
1CO_012_021,"ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ."
1CO_012_022,ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ?
1CO_012_023,ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವುದುಂಟಲ್ಲಾ. ಹೀಗೆ ಮಾನವಿಲ್ಲದ ಅಂಗಗಳಿಗೆ ಹೆಚ್ಚಾದ ಮಾನವುಂಟಾಗುತ್ತದೆ.
1CO_012_24-25,ಮಾನವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೇ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಜೋಡಿಸಿದ್ದಾನೆ.
1CO_012_026,ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
1CO_012_027,ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.
1CO_012_028,"ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ."
1CO_012_029,ಎಲ್ಲರು ಅಪೊಸ್ತಲರೋ? ಎಲ್ಲರು ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?
1CO_012_030,ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ?
1CO_012_031,ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಸರ್ವೋತ್ತಮವಾದ ಮಾರ್ಗವೊಂದನ್ನು ನಿಮಗೆ ತೋರಿಸುತ್ತೇನೆ.
1CO_013_001,"ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ."
1CO_013_002,"ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ."
1CO_013_003,"ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು."
1CO_013_004,"ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ."
1CO_013_005,ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.
1CO_013_006,ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ.
1CO_013_007,ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
1CO_013_008,ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.
1CO_013_009,ಅಪೂರ್ಣವಾಗಿ ತಿಳಿದುಕೊಳ್ಳುತ್ತೇವೆ; ಅಪೂರ್ಣವಾಗಿ ಪ್ರವಾದಿಸುತ್ತೇವೆ.
1CO_013_010,ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವುದು.
1CO_013_011,ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.
1CO_013_012,"ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು."
1CO_013_013,"ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ."
1CO_014_001,"ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ."
1CO_014_002,ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಆತ್ಮ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.
1CO_014_003,"ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು."
1CO_014_004,"ಅನ್ಯಭಾಷೆಗಳನ್ನಾಡುವವನು ತನಗೆ ತಾನೇ ಆತ್ಮೀಕ ವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ, ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡುತ್ತಾನೆ."
1CO_014_005,"ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬುದೆ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಆ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು."
1CO_014_006,"ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?"
1CO_014_007,"ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದಗಳಲ್ಲಿ ಯಾವ ವ್ಯತ್ಯಾಸವನ್ನೂ ತೋರಿಸದಿದ್ದರೆ; ನುಡಿಸಿದ ವಾದ್ಯ ಇಂಥದ್ದೇ ಎಂದು ಹೇಗೆ ತಿಳಿಯುವುದು?"
1CO_014_008,ತುತ್ತೂರಿಯು ಅಸ್ಪಷ್ಟ ಶಬ್ದವನ್ನು ಮೊಳಗಿಸಿದರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು?
1CO_014_009,"ಹಾಗೆಯೇ ನೀವೂ ಸಹ ಸ್ಪಷ್ಟವಾದ ಭಾಷೆಯನ್ನು ನಿಮ್ಮ ಬಾಯಿಂದ ಮಾತನಾಡದೆ ಹೋದರೆ, ನಿಮ್ಮ ಮಾತಿನ ಅರ್ಥವನ್ನು ಹೇಗೆ ತಿಳಿದುಕೊಳ್ಳಲು ಸಾಧ್ಯ? ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ."
1CO_014_010,"ಲೋಕದಲ್ಲಿ ಅನೇಕ ಭಾಷೆಗಳಿವೆ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದವುಗಳಿಲ್ಲ."
1CO_014_011,ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತನಾಡುವವನಿಗೆ ನಾನು ಪರದೇಶದವನಂತಿರುವೆನು; ಮಾತನಾಡುವವನು ನನಗೆ ಪರದೇಶಿಯವನಂತಿರುತ್ತಾನೆ.
1CO_014_012,ಹಾಗೆಯೇ ನೀವು ಆತ್ಮೀಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ.
1CO_014_013,ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಲಿ.
1CO_014_014,ಯಾಕೆಂದರೆ ನಾನು ಅನ್ಯಭಾಷೆಯಲ್ಲಿ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುತ್ತಿರುತ್ತದೆ. ಆದರೆ ನನ್ನ ಬುದ್ಧಿಯು ನಿಷ್ಫಲವಾಗಿರುವುದು.
1CO_014_015,"ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು."
1CO_014_016,ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ?
1CO_014_017,"ನೀನು ಎಷ್ಟು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡಿದರೂ, ಆದರಿಂದ ಬೇರೊಬ್ಬನು ಭಕ್ತಿವೃದ್ಧಿಹೊಂದುವುದಿಲ್ಲ."
1CO_014_018,ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರನ್ನು ಕೊಂಡಾಡುತ್ತೇನೆ.
1CO_014_019,"ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ."
1CO_014_020,"ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ."
1CO_014_021,“ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ.
1CO_014_022,ಆದ್ದರಿಂದ ಅನ್ಯಭಾಷೆಗಳನ್ನಾಡುವುದು ಯೇಸುವನ್ನು ನಂಬದವರಿಗೆ ಸೂಚನೆಯಾಗಿದೆಯೇ ಹೊರತು ಯೇಸುವನ್ನು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳಿದುಕೊಳ್ಳಬೇಕು. ಆದರೆ ಪ್ರವಾದನೆಯು ಯೇಸುವನ್ನು ನಂಬದವರಿಗಾಗಿಯಲ್ಲ ನಂಬುವವರಿಗಾಗಿಯೇ ಇದೆ.
1CO_014_023,"ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?"
1CO_014_024,"ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,"
1CO_014_025,"ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು."
1CO_014_026,"ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ."
1CO_014_027,ಅನ್ಯಭಾಷೆಗಳನ್ನಾಡುವುದಾದರೆ ಇಬ್ಬರು ಅಥವಾ ಅವಶ್ಯವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು;
1CO_014_028,ಮತ್ತು ಒಬ್ಬನು ಅದರ ಅರ್ಥವನ್ನು ಹೇಳಬೇಕು. ಅರ್ಥವನ್ನು ಹೇಳುವವನಿಲ್ಲದಿದ್ದರೆ ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಸುಮ್ಮನಿರಲಿ; ತನ್ನೊಂದಿಗೂ ಮತ್ತು ದೇವರೊಂದಿಗೂ ಮಾತನಾಡಿಕೊಳ್ಳಲಿ.
1CO_014_029,"ಇಬ್ಬರು ಮೂವರು ಪ್ರವಾದಿಗಳು ಮಾತನಾಡಲಿ, ಮಿಕ್ಕಾದವರು ವಿವೇಚನೆಯಿಂದ ಕೇಳಲಿ."
1CO_014_030,ಕುಳಿತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ
1CO_014_031,"ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು."
1CO_014_032,ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿರುತ್ತವೆ.
1CO_014_033,ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.
1CO_014_034,ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ.
1CO_014_035,ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು.
1CO_014_036,ದೇವರ ವಾಕ್ಯವು ನಿಮ್ಮಿಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂದಿತೋ?
1CO_014_037,ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.
1CO_014_038,ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗುರುತಿಲ್ಲದವನಂತೆ ಇರಲಿ.
1CO_014_039,"ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ."
1CO_014_040,ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.
1CO_015_001,"ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ."
1CO_015_002,ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.
1CO_015_003,ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;
1CO_015_004,ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.
1CO_015_005,ಅನಂತರ ಕೇಫನಿಗೂ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು.
1CO_015_006,"ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ."
1CO_015_007,ತರುವಾಯ ಆತನು ಯಾಕೋಬನಿಗೂ ಅನಂತರ ಎಲ್ಲಾ ಅಪೊಸ್ತಲರಿಗೂ ಕಾಣಿಸಿಕೊಂಡನು.
1CO_015_008,"ಕಟ್ಟಕಡೆಗೆ, ದಿನತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು."
1CO_015_009,ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.
1CO_015_010,"ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ."
1CO_015_011,"ಆದ್ದರಿಂದ ನಾನಾದರೇನು ಅಥವಾ ಅವರಾದರೇನು, ಈ ರೀತಿಯಾಗಿ ನಾವೆಲ್ಲರೂ ಸುರ್ವಾತೆಯನ್ನು ಸಾರಿದ್ದೇವೆ; ಅದನ್ನು ನೀವು ನಂಬಿದಿರಿ."
1CO_015_012,"ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?"
1CO_015_013,ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ.
1CO_015_014,ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು.
1CO_015_015,ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.
1CO_015_016,ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ.
1CO_015_017,"ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ."
1CO_015_018,ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ.
1CO_015_019,ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ.
1CO_015_020,ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.
1CO_015_021,"ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ."
1CO_015_022,ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.
1CO_015_023,ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.
1CO_015_024,"ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು."
1CO_015_025,ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.
1CO_015_026,ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ.
1CO_015_027,“ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ.
1CO_015_028,ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.
1CO_015_029,ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.
1CO_015_030,ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ?
1CO_015_031,"ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ."
1CO_015_032,"ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ."
1CO_015_033,ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”
1CO_015_034,ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.
1CO_015_035,“ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು.
1CO_015_036,"ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ."
1CO_015_037,ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ.
1CO_015_038,ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ.
1CO_015_039,"ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳದು ಬೇರೆ."
1CO_015_040,"ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ."
1CO_015_041,"ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು."
1CO_015_042,ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು.
1CO_015_043,"ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು;"
1CO_015_044,"ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮೀಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮೀಕ ದೇಹವೂ ಇರುವುದು ಸತ್ಯ."
1CO_015_045,“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.
1CO_015_046,"ಆತ್ಮೀಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮೀಕವಾದದ್ದು."
1CO_015_047,"ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು."
1CO_015_048,ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ.
1CO_015_049,ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.
1CO_015_050,"ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ."
1CO_015_051,"ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು."
1CO_015_052,"ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು."
1CO_015_053,"ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ."
1CO_015_054,ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.
1CO_015_055,“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?”
1CO_015_056,ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ.
1CO_015_057,ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.
1CO_015_058,"ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ."
1CO_016_001,"ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ."
1CO_016_002,ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.
1CO_016_003,"ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು."
1CO_016_004,ಮತ್ತೆ ನಾನು ಸಹ ಹೋಗುವುದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು.
1CO_016_005,ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.
1CO_016_006,ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು.
1CO_016_007,ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ.
1CO_016_008,ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು;
1CO_016_009,"ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ."
1CO_016_010,ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.
1CO_016_011,ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.
1CO_016_012,ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು.
1CO_016_013,"ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ."
1CO_016_014,ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
1CO_016_015,ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.
1CO_016_016,"ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು."
1CO_016_017,"ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು."
1CO_016_018,ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ.
1CO_016_019,ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.
1CO_016_020,ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
1CO_016_021,ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ.
1CO_016_022,ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!
1CO_016_023,ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ
1CO_016_024,ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇರಲಿ. ಅಮೆನ್.